ಎಲ್ಲೋ ಹುಡುಕಿದೆ ಇಲ್ಲದ ದೇವರ
ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಗುರುತಿಸದಾದೆವು ನಮ್ಮೊಳಗೆ
ಎಲ್ಲಿದೆ ನಂದನ ಎಲ್ಲಿದೆ ಬಂಧನ
ಎಲ್ಲಾ ಇವೆ ಈ ನಮ್ಮೊಳಗೆ
ಒಳಗಿನ ತಿಳಿಯನು ಕಲಕದೆ ಇದ್ದರೆ
ಅಮೃತದ ಸವಿಯಿದೆ ನಾಲಗೆಗ
ಹತ್ತಿರವಿದ್ದೂ ದೂರ ನಿಲ್ಲುವೆವು
ನಮ್ಮ ಅಹಂಮಿನ ಕೋಟೆಯಲಿ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು
ನಾಲ್ಕು ದಿನದ ಈ ಬದುಕಿನಲ್ಲಿ
ನಮ್ಮ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರು ಬರೆದ ಈ ಕವನ ನನ್ನ ಅಚ್ಹುಮೆಚ್ಹಿನ ಗೀತೆ. ಎಷ್ಟು ಸರಳವಾಗಿ, ಎಷ್ಟೊಂದು ಅರ್ಥಗರ್ಭಿತವಾಗಿ ಬರೆದಿದ್ದಾರೆ. ಈ ಗೀತೆಗೆ ಸಿ. ಅಶ್ವಥ್‌ರವರು ಸಂಗೀತ ಸಂಯೋಜನೆ ನೀಡಿ ಭಾವಪೂರ್ಣವಾಗಿ ಹಾಡಿದ್ದಾರೆ.
ಈ ಸರಳವಾದ ಗೀತೆಯನ್ನ ಎಲ್ಲರೂ ಅರ್ಥ ಮಾಡಿಕೊಂಡರೆ ಎಷ್ಟೊಂದು ಸುಂದರವಾಗಿರುತ್ತೆ ಅಲ್ವಾ ನಮ್ಮ ಜೀವನ!!!
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ